comparemela.com


Sanjevani
ಬೆಂಗಳೂರು,ಜೂ.೨೭- ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ನಿರ್ಮಾಣವಾದ ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವನ್ನಾಗಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಂದು ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ ಕೆಂಪೇಗೌಡರ ಹೆಸರು ಬೆಂಗಳೂರಿನೊಂದಿಗೆ ಹಾಸುಹೊಕ್ಕಾಗಿದೆ. ಬೆಂಗಳೂರಿನ ಮೂಲ ಸೌಕರ್ಯಗಳ ಅಮೂಲಾಗ್ರ ಸುಧಾರಣೆ ಮೂಲಕ ಜನಜೀವನವನ್ನು ಸಹನೀಯಗೊಳಿಸುವುದು ಸರ್ಕಾರದ ಗುರಿಯಾಗಿದೆ ಎಂದರು.
ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಬೆಂಗಳೂರು ಮಿಷನ್-೨೦೨೨ ಯೋಜನೆಯ ಮೂಲಕ ಸುಗಮ ಸಂಚಾರ, ಹಸಿರು ಸ್ವಚ್ಛ ಸುಂದರ ನಗರವನ್ನಾಗಿ ಮಾರ್ಪಡಿಸುವ ಕೆಲಸ ನಡೆದಿದೆ. ಬೆಂಗಳೂರು ಉಪನಗರ ರೈಲು ಯೋಜನೆಯು ಅನುಷ್ಠಾನಗೊಳ್ಳುತ್ತಿದೆ ಎಂದರು.
ಬೆಂಗಳೂರಿನ ಅಭಿವೃದ್ಧಿಯ ದೃಷ್ಟಿಯಿಂದ ಪೆರಿಫೆರಲ್ ರಿಂಗ್‌ರಸ್ತೆ ಅಭಿವೃದ್ಧಿ ಹಾಗೂ ಉಪನಗರಗಳ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗಿದೆ. ಇಂದು ಬೆಂಗಳೂರು ವಿಶ್ವವಿಖ್ಯಾತ ನಗರವಾಗಿ ಬೆಳೆದಿದೆ. ಇಂತಹ ಬೆಂಗಳೂರಿನ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಸಿ ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದರು.
ನಾಡಪ್ರಭು ಕೆಂಪೇಗೌಡರು ೫ ಶತಮಾನಗಳ ಹಿಂದೆ ಅಸ್ಥಿತ್ವಕ್ಕೆ ತಂದ ಬೆಂಗಳೂರು ಮಹಾ ನಗರವಾಗಿ ಅಭಿವೃದ್ಧಿಗೊಂಡಿದೆ. ಪ್ರಗತಿ ಪರ ಧೋರಣೆಗೆ ಪೂರಕವಾಗಿಯೇ ಬೆಳೆದಿದೆ ಎಂದರು.
ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ ನಾಡಿನ ಪರಂಪರೆಯನ್ನು ಉಳಿಸುವ ಕಾರ್ಯವನ್ನೂ ಕೈಗೊಳ್ಳಲಾಗಿದೆ. ಕೆಂಪೇಗೌಡರ ೧೦೦ ಅಡಿ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಬೆಂಗಳೂರಿನಲ್ಲಿ ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿ ನಗರವನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರದ್ದು, ನಗರದಲ್ಲಿ ಉದ್ಯಾನವನಗಳಲ್ಲದೆ ಅನೇಕ ಕೆರೆಗಳು, ದೇವಾಲಯಗಳನ್ನು ಕೆಂಪೇಗೌಡರು ನಿರ್ಮಿಸಿದ್ದಾರೆ. ಬೆಂಗಳೂರನ್ನು ಎಲ್ಲ ದೃಷ್ಟಿಯಿಂದಲೂ ಮಾದರಿ ನಗರವನ್ನಾಗಿಸಿದ್ದರು ಎಂದು ಶ್ಲಾಘಿಸಿದರು.
ಇಂದು ಶಂಕುಸ್ಥಾಪನೆಗೊಂಡಿರುವ ಕೆಂಪೇಗೌಡರ ಅಧ್ಯಯನ ಕೇಂದ್ರ ಶೀಘ್ರವಾಗಿ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ನೆರವಾಗಿ ಕೆಂಪೇಗೌಡರ ಕುರಿತು ಇನ್ನಷ್ಟು ಬೆಳಕು ಚೆಲ್ಲಲ್ಲಿ. ಇಂದು ಬಿಡುಗಡೆಯಾಗಿರುವ ಕೆಂಪೇಗೌಡರ ಅಂಚೆ ಚೀಟಿ ಮತ್ತು ಲಕೋಟೆ ಅವರ ಹೆಸರನ್ನು ಜನಮಾನಸದಲ್ಲಿ ಶಾಶ್ವತಗೊಳಿಸಲಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾಮಠದ ಶ್ರೀಗಳಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿ, ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಸಚಿವರಾದ ಗೋಪಾಲಯ್ಯ, ನಾರಾಯಣಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Related Keywords

Bangalore ,Karnataka ,India ,Bengaluru ,Chandra Swamiji ,Program Adichunchanagiri Da ,Green Clear ,Bengaluru Build ,More Light ,Math Swamiji ,Math Chandra Swamiji ,பெங்களூர் ,கர்நாடகா ,இந்தியா ,பெங்களூரு ,மேலும் ஒளி ,

© 2024 Vimarsana

comparemela.com © 2020. All Rights Reserved.