ಹರಿಯಾಣದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಪಂಜಾಬ್ ರೈತರು ಎರಡು ಗಂಟೆಗಳ ಕಾಲ ರಸ್ತೆ ಮತ್ತು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ವಿವಿಧ ರೈತ ಸಂಘಟನೆಗಳಿಗೆ ಸೇರಿದ ಪ್ರತಿಭಟನಾಕಾರರು ಕರ್ನಾಲ್‌ನಲ್ಲಿ ರೈತರ ಮೇಲೆ 'ಬಲ' ಪ್ರಯೋಗಿಸಿದ್ದಕ್ಕಾಗಿ ಹರಿಯಾಣದ ಬಿಜೆಪಿ ನೇತೃತ್ವದ ಸರ್ಕಾರದ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.