ಪೊಲೀಸರ ಅಮಾನುಷ ಹಲ್ಲೆಯಿಂದ ಮೃತಪಟ್ಟಿದ್ದ ಪಟ್ಟಣದ ರಾಯ್ ಡಿಸೋಜಾ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ಹಲ್ಲೆ ನಡೆಸಿದ್ದರು ಎನ್ನಲಾದ ಪೊಲೀಸ್ ಸಿಬ್ಬಂದಿ ವಿಚಾರಣೆ ಭಾನುವಾರ ನಡೆಯಿತು. ಡಿವೈಎಸ್‌ಪಿ ದರ್ಜೆಯ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ನಾಲ್ವರು ಸಿಐಡಿ ಅಧಿಕಾರಿಗಳು, ವಿರಾಜಪೇಟೆಗೆ ಆಗಮಿಸಿದ್ದು ಪ್ರಕರಣಕ್ಕೆ ಸಂಬಂಧಿದಂತೆ ಮಾಹಿತಿ ಕಲೆ ಹಾಕಿದರು.