ಉಡುಪಿ: ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಸಮಸ್ಯೆ ತಂದೊಡ್ಡಬಹುದು ಎಂಬ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ‘ವಾತ್ಸಲ್ಯ’ ಮಕ್ಕಳ ತಪಾಸಣಾ ಶಿಬಿರ ಆರಂಭಿಸಲಾಗಿತ್ತು. ಇದೀಗ ‘ವಾತ್ಸಲ್ಯ’ ಕಾರ್ಯಕ್ರಮವನ್ನು ಸರ್ಕಾರ ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.