ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನವನ್ನು ಉದ್ದೇಶಿಸಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಂಗಳವಾರ ಮಾಡಿರುವ ಮೊದಲ ಭಾಷಣದಲ್ಲಿ ಎಲ್ಲ ರಾಷ್ಟ್ರಗಳು ಜಾಗತಿಕ ಸಮಸ್ಯೆಗಳ ಕುರಿತು ಪ್ರಸ್ತಾಪಿಸುವಂತೆ ಕರೆ ನೀಡಿದ್ದಾರೆ. ಕೋವಿಡ್–19 ಸಾಂಕ್ರಾಮಿ, ಹವಾಮಾನ ವೈಪರೀತ್ಯ ಹಾಗೂ ಮಾನವ ಹಕ್ಕುಗಳ ಕುರಿತು ಮಾತನಾಡುವಂತೆ ಕೇಳಿದ್ದಾರೆ. ಚೀನಾದೊಂದಿಗೆ ಅಮೆರಿಕವು 'ಹೊಸ ಶೀತಲ ಸಮರ' ನಡೆಸಲು ಬಯಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.