ಸುಳ್ಯ ತಾಲ್ಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ ಭಾನುವಾರ ಬೆಳಿಗ್ಗೆ ಬಾನೆತ್ತರಕ್ಕೆ ಹಾರಾಡುತ್ತಿದ್ದ ಧ್ವಜವನ್ನು ಕಂಡ ಕೂಲಿ ಕೆಲಸಕ್ಕೆ ಹೊರಟಿದ್ದ ಮಹಿಳೆಯೊಬ್ಬರು, ಚಪ್ಪಲಿ ಕಳಚಿ, ಧ್ವಜಕ್ಕೆ ಸೆಲ್ಯೂಟ್ ಹೊಡೆದು, ಮುಂದೆ ಸಾಗಿದರು. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.