ಜಿಲ್ಲೆಯಲ್ಲಿ ಎಲ್ಲವೂ ಮುಕ್ತವಾಗಿದ್ದು, ಕೊರೊನಾ ಪ್ರಕರಣಗಳೂ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿವೆ. ಇಂಥ ಸಂದರ್ಭದಲ್ಲಿಯೂ ವಾರಾಂತ್ಯದ ಕರ್ಫ್ಯೂ ಹೇರುವ ಅವಶ್ಯಕತೆಯಿಲ್ಲ. ಒಂದೊಮ್ಮೆ ಈ ಸಂಬಂಧ ಆದೇಶ ಹೊರಡಿಸಿದರೆ ಅದನ್ನು ಪಾಲಿಸುವುದಿಲ್ಲ ಎಂದು ವ್ಯಾಪಾರಸ್ಥರು, ಉದ್ಯಮಿಗಳು ಜಿಲ್ಲಾಡಳಿತಕ್ಕೆ ಸವಾಲು ಹಾಕಿದರು.
ಕೋವಿಡ್‌ನಿಂದಾಗಿ ವ್ಯಾಪಾರಸ್ಥರು, ಸಾರ್ವಜನಿಕರು ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಹಾಗೂ ಕಳೆದ ವರ್ಷವೇ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಿದ್ದರಿಂದ ಈ ಬಾರಿ ಆಸ್ತಿ ತೆರಿಗೆ ಸಂಗ್ರಹವನ್ನು ಕೈಬಿಡಬೇಕು ಎಂದು ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ) ಅಧ್ಯಕ್ಷ ಪ್ರಶಾಂತ ಮಾನಕರ ಮಹಾನಗರ ಪಾಲಿಕೆ ಆಯುಕ್ತರನ್ನು ಒತ್ತಾಯಿಸಿದರು.