ಸರ್ಕಾರಿ ಶಾಲೆಗಳು ಎಂದರೆ ಮೂಗುಮುರಿಯುವ ಕಾಲವೊಂದಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಒತ್ತು ನೀಡಿರುವುದರಿಂದ ಸರ್ಕಾರಿ ಶಾಲೆಗಳು ಬದಲಾವಣೆಯ ‘ಪರ್ವ’ಕ್ಕೆ ಕಾಲಿಟ್ಟು ಜಗಮಗಿಸುತ್ತಿವೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾಗಲು ಪೋಷಕರೂ ಮುಂದಾಗುತ್ತಿದ್ದಾರೆ.