ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡು ದಿನ (ಶುಕ್ರವಾರ ಹಾಗೂ ಭಾನುವಾರ ರಜೆ ಕಾರಣ ನಾಮಪತ್ರ ಸಲ್ಲಿಕೆ ಇರುವುದಿಲ್ಲ) ಬಾಕಿ ಉಳಿದಿದ್ದರೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಹಾಗೂ ಇಂತಹ ಆಕಾಂಕ್ಷಿಗೇ ಟಿಕೆಟ್ ನೀಡಬೇಕು ಎಂದು ನಾಯಕರು ಪಟ್ಟು ಹಿಡಿದಿರುವುದರಿಂದ ಪಟ್ಟಿ ಅಂತಿಮಗೊಳ್ಳುವುದು ವಿಳಂಬವಾಗುತ್ತಿದೆ.