‘ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಕರ್ನಾಟಕವು ಇಡೀ ದೇಶದಲ್ಲೇ ಮುಂಚೂಣಿಯಲ್ಲಿದೆ. ಈ ಮೂರು ಮಾರ್ಗಗಳಲ್ಲಿ ಸಾಗಿದಾಗ ನಮ್ಮ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ. ವಿಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.