ಇಲ್ಲಿನ ನಗರಪಾಲಿಕೆ ಚುನಾವಣೆಯಲ್ಲಿನ ಗೆಲುವು ಮತ್ತು ಅಲ್ಲಿಂದ ಗಳಿಸಿದ ಜನಪ್ರಿಯತೆಯನ್ನು ಏಣಿಯನ್ನಾಗಿ ಮಾಡಿಕೊಂಡು ವಿಧಾನಸಭೆ ಪ್ರವೇಶಿಸಿದ ಕೆಲವರಲ್ಲಿ ದಿವಂಗತ ಸಂಭಾಜಿ ಪಾಟೀಲ ಪ್ರಮುಖರೆನಿಸಿದ್ದಾರೆ.
ಬಹುನಿರೀಕ್ಷಿತ ಹಾಗೂ ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಇಲ್ಲಿನ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಬುಧವಾರ ಆದೇಶ ಹೊರಡಿಸಿದೆ. ಅದರಂತೆ, ಸೆ.3ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಸೆ.6ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.